ಕಲಬುರ್ಗಿ : ಆಫ್ಜಲ್ಪುರ ತಾಲೂಕಿನ ಅಕ್ರಮ ಮರಳುಗಾರಿಕೆ ಅಡ್ಡ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ 7.50 ಲಕ್ಷ ಮರಳನ್ನು ಜಪ್ತಿ ಮಾಡಿಕೊಂಡಿದ್ದಾರೆ.ಕಲಬುರ್ಗಿ ಜಿಲ್ಲೆಯ ಆಫ್ಜಲ್ಪುರ ತಾಲೂಕಿನ ಪೊಲೀಸರ ಕಾರ್ಯಾಚರಣೆ ನಡೆಸಿದ್ದು ದೇಸಾಯಿ ಕಲ್ಲೂರ್, ಗುಡ್ಡೇವಾಡಿ, ಘತ್ತರಗ ಗ್ರಾಮದ ಅಕ್ರಮ ಮರಳು ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಕಲಬುರ್ಗಿ ಜಿಲ್ಲೆಯ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಸುಮಾರು 380 ಲೋಡ್ ನಷ್ಟು ಅಕ್ರಮ ಮರಳುವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಭೀಮಾ ನದಿಯಿಂದ ಅಕ್ರಮವಾಗಿ ಬರಲು ತಂದು ಸಂಗ್ರಹಿಸಿದ್ದರು ಎನ್ನಲಾಗಿದೆ.ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿದ್ದಾರೆ. ಕಲ್ಬುರ್ಗಿ ಜಿಲ್ಲೆಯ ಅಫ್ಜಲ್ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.