ಅರ್ಥವಿಲ್ಲದ ಪ್ರಶ್ನೆಗೆ ಸುಮ್ಮನಿರುವುದೇ ಉತ್ತರ.
ನಮ್ಮ ಉತ್ಸಾಹ ಹುಲ್ಲಿನ ಬೆಂಕಿಯಾಗಬಾರದು, ಕಲ್ಲಿದ್ದಲ ಕಾವಾಗಬೇಕು.
ವಿದ್ಯಾರ್ಥಿ ಭತ್ತ ಬೆಳೆಯುವ ಗದ್ದೆಗಳಾಗಬೇಕು, ಬರಿಯ ಚೀಲಗಳಾಗಬಾರದು
ನೀವು ಲೋಕವನ್ನಾಗಲೋ, ಸಮಾಜವನ್ನಾಗಲೀ, ಪುರೋಹಿತಶಾಹಿಯನ್ನಾಗಲೀ ಬದಲಾಯಿಸಲು ಪ್ರಯತ್ನಿಸುವ ಅಗತ್ಯ ಖಂಡಿತ ಇಲ್ಲ.
ನೀವು ಮತ್ತು ನಿಮ್ಮ ಮನಸ್ಸು ಪರಿವರ್ತನೆ ಆಗದೆ ಏನೂ ಬದಲಾಗುವುದಿಲ್ಲ”
ಇಂದಿನ ಕನಸು, ನಾಳೆಯ ಮನಸು, ನಾಡಿದ್ದಿನ ಉಣಿಸು.
ಮುಚ್ಚು ಮರೆ ಇಲ್ಲದೆಯೇ ನಿನ್ನಮುಂದೆಲ್ಲವನು ಬಿಚ್ಚಿಡುವೇ ಓ ಗುರುವೇ ಅಂತರಾತ್ಮ
ಪಾಪವಿದೆ ಪುಣ್ಯವಿದೆ , ನರಕವಿದೆ ನಾಕವಿದೆ, ಸ್ವೀಕರಿಸು ಓ ಗುರುವೇ ಅಂತರಾತ್ಮ …ಕುವೆಂಪು