ತೈಪೆ: ತೈವಾನ್‌ನ ಪೂರ್ವ ಕೌಂಟಿ ಹುವಾಲಿಯನ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸರಣಿ ಭೂಕಂಪ ಸಂಭವಿಸಿದ ವರದಿಯಾಗಿದೆ.
ದೇಶದಲ್ಲಿ ಸಂಭವಿಸಿದ ಅತ್ಯಂತ ಶಕ್ತಿಶಾಲಿ ಭೂಕಂಪ ಇದಾಗಿದೆ ಎಂದು ಹೇಳಲಾಗಿದೆ. ತೈವಾನ್ ರಾಜಧಾನಿಯಲ್ಲಿ ಸೋಮವಾರ ರಾತ್ರಿಯಿಂದ ಮಂಗಳವಾರ ಮುಂಜಾನೆಯವರೆಗೆ ಇಪ್ಪತ್ತಕ್ಕೂ ಹೆಚ್ಚು ಭಾರಿ ಭೂಕಂಪನಡಾ ಅನುಭವವಾಗಿದೆ ಎಂದು ಹೇಳಲಾಗಿದೆ.
ಪೂರ್ವ ಹುವಾಲಿಯನ್‌ನಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಕೇಂದ್ರ ಹವಾಮಾನ ಆಡಳಿತ ತಿಳಿಸಿದೆ.
ಭೂಕಂಪದಿಂದ ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ ಎನ್ನಲಾಗಿದ್ದು ಯಾವುದೇ ಕಟ್ಟಡಗಳಿಗೂ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎನ್ನಲಾಗಿದೆ.
ಕೇಂದ್ರ ಹವಾಮಾನ ಇಲಾಖೆಯ ಪ್ರಕಾರ, ಮೊದಲ ತೀವ್ರ ಭೂಕಂಪವು ಸೋಮವಾರ ಸಂಜೆ 5:08ಕ್ಕೆ ರಾಜಧಾನಿ ತೈಪೆಯಲ್ಲಿ 5.5 ರ ತೀವ್ರತೆಯಾ ಭೂಕಂಪ ಸಂಭವಿಸಿದೆ ಎಂದು ಹೇಳಲಾಗಿದೆ.
ಸರಣಿ ಭೂಕಂಪದ ಅನುಭವ:
ಸೋಮವಾರ ಸಂಜೆಯಿಂದ ಮೊದಲ ಭೂಕಂಪ ಸಂಭವಿಸಿದ ಬೆನ್ನಲ್ಲೇ ಮಂಗಳವಾರ ಮುಂಜಾನೆ ವರೆಗೆ ಇಪ್ಪತ್ತಕ್ಕೂ ಹೆಚ್ಚು ಭೂಕಂಪಗಳು ಸಂಭವಿಸಿದೆ ಎಂದು ಅಲ್ಲಿನ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ ಅಲ್ಲದೆ ಭೂಕಂಪ ಸಂಭವಿಸಿದ ಕೂಡಲೇ ಮನೆಮಂದಿ ಮನೆಯಿಂದ ಹೊರಗೆ ಓಡೋಡಿ ಬಂದಿದ್ದು ಮತ್ತೆ ಮನೆಯೊಳಗೇ ಹೋಗುವ ಧೈರ್ಯ ನಮ್ಮಲ್ಲಿ ಇರಲಿಲ್ಲ ಎಂದು ಹೇಳಿದ್ದಾರೆ.
ಮಧ್ಯರಾತ್ರಿ 2:26ಕ್ಕೆ 6.0 ತೀವ್ರತೆಯ ಭೂಕಂಪ ಸಂಭವಿಸಿದ್ದು, ಆರು ನಿಮಿಷಗಳ ನಂತರ 6.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಕೇಂದ್ರ ಹವಾಮಾನ ಆಡಳಿತ ತಿಳಿಸಿದೆ.