ಕೊಡಗು: ಇಡೀ ಕರ್ನಾಟಕವನ್ನೇ (Karnataka) ಬೆಚ್ಚಿಬೀಳಿಸೋ ಭೀಕರ ಕೊಲೆ ಕೊಡಗಿನ (Kodagu) ಸೋಮವಾರಪೇಟೆಯ (Somwarpet) ಸೂರ್ಲಬ್ಬಿ ಗ್ರಾಮದಲ್ಲಿ ನಡೆದಿದೆ. ಇಡೀ ಎಸ್ ಎಸ್​ ಎಲ್​ಸಿ ಪರೀಕ್ಷೆಯಲ್ಲಿ (SSLC Exam) ಶಾಲೆಗೆ 100% ಫಲಿತಾಂಶ ತಂದುಕೊಟ್ಟಿದ್ದ ವಿದ್ಯಾರ್ಥಿನಿಯ (Stundent) ತಲೆ ಕಡಿದು ಬರ್ಬರವಾಗಿ ಕೊಲೆ ಮಾಡಲಾಗಿದೆ.

ಬಾಲಕಿಯ (Minor girl) ತಲೆಯನ್ನೇ ಕತ್ತರಿಸಿ ರುಂಡ-ಮುಂಡ ಬೇರ್ಪಡಿಸಿ ಕೀಚಕ ವಿಕೃತಿ ಮೆರೆದಿದ್ದಾನೆ.

ಮೃತ ವಿದ್ಯಾರ್ಥಿನಿ ಸೂರ್ಲಬ್ಬಿ ಸರ್ಕಾರಿ ‌ಪ್ರೌಢಶಾಲೆಯಲ್ಲಿ 2023-24 ನೇ ಸಾಲಿನಲ್ಲಿ ಎಸ್​ ಎಸ್​ ಎಲ್​ಸಿ ವ್ಯಾಸಂಗ ಮಾಡುತ್ತಿದ್ದಳು. ಸೂರ್ಲಬ್ಬಿ ಸರ್ಕಾರಿ ‌ಪ್ರೌಢಶಾಲೆಯಲ್ಲಿದ್ದ ಓರ್ವ ವಿದ್ಯಾರ್ಥಿನಿ ತೇರ್ಗಡೆ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಪಾಸ್ ಆಗಿದ್ದ ಪರಿಣಾಮ ಶೇಕಡಾ 100 ರಷ್ಟು ಫಲಿತಾಂಶ ಲಭ್ಯವಾಗಿತ್ತು. ಬೆಳಗ್ಗೆ SSLC ಪಾಸ್‌ ಆಗಿದ್ದ ಖುಷಿಯಲ್ಲಿದ್ದ ಸೂರ್ಲಬ್ಬಿ ಗ್ರಾಮದ ಬಾಲಕಿಯನ್ನು 35 ವರ್ಷದ ಓಂಕಾರಪ್ಪ ಎಂಬಾತ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.

ಇನ್ನು, ಎಸ್​ ಎಸ್​ ಎಲ್​ಸಿ ಪಾಸ್ ಆಗಿದ್ದ ವಿದ್ಯಾರ್ಥಿನಿಗೆ ಆರೋಪಿಯೊಂದಿಗೆ ನಿನ್ನೆ ನಿಶ್ಚಿತಾರ್ಥ ಫಿಕ್ಸ್ ಮಾಡಿದ್ದರಂತೆ. ಆದರೆ ಪೊಲೀಸರು ಮಧ್ಯ ಪ್ರವೇಶ ಮಾಡಿ ಅಪ್ರಾಪ್ತ ಬಾಲಕಿ ಆಗಿರುವ ಕಾರಣ ನಿಶ್ಚಿತಾರ್ಥ ನಿಲ್ಲಿಸಿದ್ದಂತೆ. ಘಟನೆ ಬಳಿಕ ಬಾಲಕಿಯನ್ನು ಆಕೆಯ ಪೋಷಕರು ಮನೆಗೆ ವಾಪಸ್ ಕರೆ ತಂದಿದ್ದರಂತೆ. ಆರೋಪಿ ಕೂಡ ಮನೆಗೆ ವಾಪಸ್ ಆಗಿದ್ದನಂತೆ. ಇದೇ ಸಿಟ್ಟಿನಲ್ಲಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.

ಘಟನೆ ಬಳಿಕ ನಿನ್ನೆ ಸಂಜೆ ಮನೆಗೆ ಬಂದಿದ್ದ ಆರೋಪಿ ಬಾಲಕಿಯೊಂದಿಗೆ ಮಾತನಾಡಬೇಕು ಎಂದು ಪೋಷಕರಿಗೆ ಹೇಳಿ ಮನೆಯಿಂದ ಸ್ವಲ್ಪ ದೂರಕ್ಕೆ ಕರೆದುಕೊಂಡು ಹೋಗಿದ್ದನಂತೆ. ಈ ವೇಳೆ ನಿರ್ಜನ ಪ್ರದೇಶದಲ್ಲಿ ತಲೆ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿರುವ ಆರೋಪ ಕೇಳಿ ಬಂದಿದೆ.

ವಿದ್ಯಾರ್ಥಿನಿ ತಲೆ ಕತ್ತರಿಸಿ ರುಂಡ ಮುಂಡ ಬೇರೆ ಮಾಡಿ ರುಂಡ ಒಂದು ಕಡೆ ಮುಂಡ ಒಂದು ಕಡೆ ಬಿಸಾಡಿ ಆರೋಪಿ ಎಸ್ಕೇಪ್ ಆಗಿದ್ದಾನಂತೆ. ಸದ್ಯ ಅಪ್ರಾಪ್ತ ಬಾಲಕಿ ಹತ್ಯೆ ಬಗ್ಗೆ ಕೊಡಗು ಪೋಲಿಸರು ಬಿರುಸಿನ ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಕೊಡಗು ಎಸ್​ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಬಾಲಕಿಯ ಮೃತದೇಹ ಮಡಿಕೇರಿ ಜಿಲ್ಲಾಸ್ಪತ್ರೆಗೆ ಶವಾಗಾರಕ್ಕೆ ಶಿಫ್ಟ್ ಮಾಡಿದ್ದು, ಮರಣೋತ್ತರ ಬಳಿಕ ಮೃತದೇಹವನ್ನು ಪೋಷಕರಿಗೆ ಹಸ್ತಾಂತರ ಮಾಡುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *