ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಡಿಸಿಪಿ ರಾಜೀವ್ ಅವರನ್ನು ಕಾನೂನು ಸುವ್ಯವಸ್ಥೆ (Law and order) ಕಾಪಾಡುವಲ್ಲಿ ಲೋಪ ಎಸಗಿದ ಆರೋಪದ ಮೇರೆಗೆ ಅಮಾನತು ಮಾಡಲಾಗಿದೆ.
ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಪಿ ರಾಜೀವ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.
ಅಂಜಲಿ ಹತ್ಯೆ ಪ್ರಕರಣದಲ್ಲಿ ಕರ್ತವ್ಯ ಲೋಪವೆಸಗಿದ ಇನ್ಸ್‌ಪೆಕ್ಟರ್ ಹಾಗೂ ಮಹಿಳಾ ಪೇದೆಯನ್ನು ಅಮಾನತು (suspended) ಮಾಡಲಾಗಿತ್ತು.
ಇದೀಗ ಐಪಿಎಸ್ ಅಧಿಕಾರಿಯ ತಲೆದಂಡವಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಲೋಪ ಎಸಗಿದ್ದರಿಂದ ಹುಬ್ಬಳ್ಳಿ-ಧಾರವಾಡ ಡಿಸಿಪಿ ರಾಜೀವ್ ಅವರನ್ನೂ ಅಮಾನತಾಗಿದ್ದಾರೆ.
ಡಿಸಿಪಿ ರಾಜೀವ್ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ (Order of State Govt) ಹೊರಡಿಸಿದೆ.
ಹುಬ್ಬಳ್ಳಿಗೆ ಗೃಹ ಸಚಿವರು ಭೇಟಿ ನೀಡುವ ಮುಂಚೆ ಅಮಾನತು ಆದೇಶ ಹೊರಬಿದ್ದಿದ್ದು, ಸೋಮವಾರ ಹುಬ್ಬಳ್ಳಿಗೆ ಗೃಹ ಸಚಿವ ಪರಮೇಶ್ವರ್ ಆಗಮಿಸಲಿದ್ದಾರೆ.
ಇತ್ತೀಚೆಗೆ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಹಾಗೂ ಮಹಿಳಾ ಪೇದೆಯನ್ನು ಅಮಾನತು ಮಾಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಆದೇಶ ಹೊರಡಿಸಿದ್ದರು.