ಬೆಂಗಳೂರು : ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೇ. 29ರಿಂದ ಜೂನ್‌13 ರವರೆಗೆ ವಿಶೇಷ ಪರಿಹಾರ ಬೋಧನ ತರಗತಿಗಳನ್ನು ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

2024ರ ಮಾರ್ಚ್-ಏಪ್ರಿಲ್ ರಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ಹಾಗೂ C ಮತ್ತು C+ ಪಡೆದ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ 2024ರ ಎಸ್.ಎಸ್.ಎಲ್.ಸಿ.

ಪರೀಕ್ಷೆ-2ರಲ್ಲಿ ಉತ್ತೀರ್ಣರಾಗಲು ತಯಾರಿಗೊಳಿಸಲು ಆಯಾ ಶಾಲೆಯ ವಿಷಯ ಬೋಧನಾ ಶಿಕ್ಷಕರಿಂದ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ದಿನಾಂಕ 15.05.2024 ರಿಂದ ದಿನಾಂಕ:05.06.2024ರವರೆಗೆ ನಡೆಸಲು ಸುತ್ತೋಲೆ ಹೊರಡಿಸಲಾಗಿತ್ತು.

ಇದೀಗ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ಸರ್ಕಾರದ ಸೂಚನೆಗಳನ್ನಯ ಮುಂದೂಡಲಾಗಿದ್ದು, ಇವುಗಳನ್ನು ದಿನಾಂಕ: 29/05/2024 ರಿಂದ ದಿನಾಂಕ: 13/06/2024 ರವರೆಗೆ ನಡೆಸಲು ತಿಳಿಸಿದೆ. 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-02ನ್ನು ದಿನಾಂಕ: 14/06/2024 ರಿಂದ ಪ್ರಾರಂಭಿಸಲಾಗುವುದು.

ಹೀಗಿದೆ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ
-ದಿನಾಂಕ 14-06-2024ರ ಶುಕ್ರವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(ಎನ್ ಸಿಇಆರ್ ಟಿ), ಸಂಸ್ಕೃತ.
-ದಿನಾಂಕ 15-06-2024ರ ಶನಿವಾರ- ತೃತೀಯ ಭಾಷೆ – ಹಿಂದಿ( ಎನ್ ಸಿ ಇ ಆರ್ ಟಿ), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.
ಎನ್ ಎಸ್ ಕ್ಯೂ ಎಫ್ ಪರೀಕ್ಷಾ ವಿಷಯಗಳು- ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್, ಆಪರೆಲ್ ಮೇಡ್ ಆಪ್ಸ್ ಅಂಡ್ ಹೋಮ್ ಫರ್ನಿಷಿಂಗ್, ಎಲೆಕ್ಟ್ರಾನಿಕ್ಸ್ ಅಂಡ್ ಹಾರ್ಡ್ ವೇರ್
-ದಿನಾಂಕ 19-06-2024ರ ಬುಧವಾರ – ಕೋರ್ ಸಬ್ಜೆಕ್ಟ್ – ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿರಯರಿಂಗ್-IV, ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಅಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಪ್ರೋಗ್ರಾಮಿಂಗ್ ಇನ್ ANSI C, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥ ಶಾಸ್ತ್ರ.
-ದಿನಾಂಕ 20-06-2024ರ ಗುರುವಾರ- ಕೋರ್ ಸಬ್ಜೆಕ್ಟ್ – ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ.
-ದಿನಾಂಕ 21-06-2024ರ ಶುಕ್ರವಾರ – ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ
-ದಿನಾಂಕ 22-06-2024ರ ಶನಿವಾರ – ಕೋರ್ ಸಬ್ಜೆಕ್ಟ್ – ಸಮಾಜ ವಿಜ್ಞಾನ

Leave a Reply

Your email address will not be published. Required fields are marked *