ಮೈಸೂರು: ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.
ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಆದೇಶಿಸಿದರು.
