ಬೆಂಗಳೂರು: ನಕಲಿ ಪೊಲೀಸರು ಹೊಯ್ಸಳ ವಾಹನದಲ್ಲಿ ಬಂದು ಜನರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ಅಟ್ಟಿಸಿಕೊಂಡು ಹೋಗಿದ್ದ ಘಟನೆ ಸಂಬಂಧ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತ್ ಆಗಿದ್ದಾರೆ. ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ಈ ಆದೇಶ ಹೊರಡಿಸಿದ್ದಾರೆ.
ಹೊಯ್ಸಳ ವಾಹನದಲ್ಲಿ ತೆರಳಿ ರಸ್ತೆ ಮೇಲೆ ನಿಂತು ಸಾರ್ವಜನಿಕರಿಂದ ಸುಲಿಗೆ ಮಾಡುತ್ತಿದ್ದ ಪೊಲೀಸರನ್ನು ಕಳ್ಳ ಕಳ್ಳ ಎಂದು ಕೂಗುತ್ತ ಸಾರ್ವಜನಿಕರು ಅಟ್ಟಿಸಿಕೊಂಡು ಹೋಗಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು.
ಈ ಸಂಬಂಧ ರಾಜಗೋಪಾಲನಗರ ಠಾಣೆಯ ಎಎಸ್‌ಐ ರಾಮಲಿಂಗಯ್ಯ, ಹೆಡ್ ಕಾನ್ಸ್ಟೇಬಲ್ಪ್ರಸನ್ನ ಕುಮಾರ್ ಅವರನ್ನು ಬೆಂಗಳೂರು ಪೊಲೀಸ್ಆಯುಕ್ತ ಬಿ.ದಯಾನಂದ್ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.
ರಾಮಲಿಂಗಯ್ಯ ಮತ್ತು ಪ್ರಸನ್ನ ಕುಮಾರ್ ಹೊಯ್ಸಳ ವಾಹನದಲ್ಲಿ ಬಂದು ಜನರ ಬಳಿ ಹಣ ವಸೂಲಿ ಮಾಡುತ್ತಿದ್ದರು. ಇದನ್ನು ಕೆಲವರು ವಿಡಿಯೋ ಮಾಡಿದ್ದು ಬಳಿಕ ಕಳ್ಳ, ಕಳ್ಳ ಎಂದು ಅಟ್ಟಿಸಿಕೊಂಡು ಹೋಗಿದ್ದರು. ಈ ಘಟನೆ ಪೊಲೀಸ್ಇಲಾಖೆಗೆ ಬಹಳ ಮುಜುಗರ ತಂದಿತ್ತು. ಹೀಗಾಗಿ ಪೊಲೀಸ್ ಕಮಿಷನರ್ ತನಿಖೆಗೆ ಆದೇಶ ನೀಡಿದ್ದರು. ಸದ್ಯ ಈಗ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.