ಬೆಂಗಳೂರು: ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹೇಳುತ್ತಿರುವುದು ನೂರಕ್ಕೆ ನೂರರಷ್ಟು ಸತ್ಯ. ಬೆಂಕಿ ಇಲ್ಲದೇ ಹೊಗೆಯಾಡಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ನೂರು ಕೋಟಿ ಆಫರ್ ಮಾಡಿದ್ದರು.
ಪೆನ್ ಡ್ರೈವ್ ಹಂಚಿಕೆ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡವಿದೆ ಎಂದು ಹೇಳುತ್ತಿದ್ದಾರೆ. ದೇವರಾಜೇಗೌಡ ಹೇಳಿಕೆಯಲ್ಲಿ ಸತ್ಯವಿದೆ ಎನಿಸುತ್ತಿದೆ. ಪೆನ್ ಡ್ರೈವ್ ಪ್ರಕರಣದ ಹಿಂದೆ ದೊಡ್ಡ ಷಡ್ಯಂತ್ರವೇ ನಡೆದಿದೆ ಎಂದು ಹೇಳಿದರು.
ಇದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಎಲ್ಲರೂ ಸೇರಿ ಮಾಡಿರುವ ದೊಡ್ಡ ಮಾಸ್ಟರ್ ಪ್ಲಾನ್. ಮೋದಿಯವರಿಗೆ ಕೆಟ್ಟ ಹೆಸರು ತರುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದರೆ ರಾಜ್ಯ ಸರ್ಕಾರದಲ್ಲಿರುವ ಎಲ್ಲರೂ ಜೈಲಿಗೆ ಹೋಗಬೇಕಾಗುತ್ತದೆ. ಎಲ್ಲರೂ ಕಂಬಿ ಎಣಿಸಬೇಕಾಗುತ್ತೆ ಎಂಬ ಭಯದಿಂದ ಸರ್ಕಾರ ಪ್ರಕರಣವನ್ನು ಸಿಬಿಐಗೆ ಕೊಡುತ್ತಿಲ್ಲ ಎಂದು ಆರೋಪಿಸಿದರು.
ತಪ್ಪು ಯಾರು ಮಾಡಿದ್ದಾರೆ ಅವರ ವಿರುದ್ಧ, ಪ್ರಜ್ವಲ್ ರೇವಣ್ಣ ವಿರುದ್ಧ ಏನೂ ಬೇಕಾದ್ರೂ ಕ್ರಮ ಕೈಗೊಳ್ಳಲಿ. ಅದೇ ರೀತಿ ಪೆನ್ ಡ್ರೈವ್ ಹಂಚಿದ್ದು ಕೂಡ ತಪ್ಪಲ್ಲವೇ? ಅವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಆ ನಿಟ್ಟಿನಲ್ಲಿ ಪ್ರಕರಣದ ತನಿಖೆ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.